ಸ್ವಂತ ಉದ್ಯಮ ಆರಂಭಿಸಲು ಸರ್ಕಾರದಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ | ಇವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು

ಎಲ್ಲರಿಗೂ ನಮಸ್ಕಾರ ಬಂಧುಗಳೇ.

ದಿನನಿತ್ಯ ನಾವು ನಮ್ಮ ಈ ಜಾಲತಾಣದಲ್ಲಿ ಜನರಿಗೆ, ರೈತರಿಗೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಉಪಯುಕ್ತ ಮಾಹಿತಿಗಳನ್ನು ದಿನನಿತ್ಯ ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ಸ್ವಯಂ ಉದ್ಯೋಗ ಆರಂಭಿಸಲು ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಸಹಾಯವಾಗುವಂತೆ ಉಚಿತ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ, ಅರ್ಜಿ ಸಲ್ಲಿಸಲು ಯಾರು ಅರ್ಹರು, ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಂಬ ಮಾಹಿತಿ ಸೇರಿದಂತೆ ಸಂಪೂರ್ಣವಾದ ಮಾಹಿತಿಯನ್ನು ಅಂಕಣದಲ್ಲಿ ನೀಡಲಾಗಿದೆ. ಅರ್ಹರಿರುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ನೀವು ಆಸಕ್ತರಿದ್ದರೆ ಈ ಕೊಡಲೇ ಅರ್ಜಿ ಸಲ್ಲಿಸಿ, ಈ ಯೋಜನೆಯ ಲಾಭವನ್ನು ಪಡೆಯಿರಿ.

ಯಾವುದು ಈ ಯೋಜನೆ?

ಈ ಯೋಜನೆಯ ಹೆಸರು ” ಉದ್ಯಮಶೀಲತಾ ತರಬೇತಿ “. ಈ ಒಂದು ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹಲವು ತಿಂಗಳುಗಳ ಕಾಲ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿ ಸ್ವಯಂ ಉದ್ಯಮ ಆರಂಭಿಸಲು ಬೇಕಾಗಿರುವ ಪೂರಕ ತರಬೇತಿಯನ್ನು ನೀಡಲಾಗುವುದು. IIM Bangalore ಐ ಐ ಎಂ ಬೆಂಗಳೂರು, ಭಾರತ ದೇಶದ ಪ್ರತಿಷ್ಠಿತ ಮ್ಯಾನೇಜ್ಮೆಂಟ್ ಕಾಲೇಜ್ ಆಗಿದ್ದು ಯುವಕರನ್ನು ಉದ್ಯಮಶೀಲರನ್ನಾಗಿ ಮಾಡಲು ಮುಖ್ಯ ಪಾತ್ರ ವಹಿಸುತ್ತಿದೆ.

ತರಬೇತಿಯ ಮಾಹಿತಿ :

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನವರು ಅರ್ಹ ಫಲಾನುಭವಿಗಳಿಗೆ ಉತ್ತಮ ಶೀಲತಾ ತರಬೇತಿ ಯೋಜನೆಯ ಅಡಿಯಲ್ಲಿ ಆರು ತಿಂಗಳವರೆಗೆ ಉಚಿತ ತರಬೇತಿಯನ್ನು ನೀಡುವ ಉದ್ದೇಶ ಇದಾಗಿತ್ತು, ಅರ್ಹರಿರುವ ಎಲ್ಲಾ ಆಸಕ್ತ ಮತ್ತು ಅರ್ಹ ಫಲಾನುಭವಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆದುಕೊಂಡು ಉದ್ದಿಮೆಗಳಾಗಿ ಜೀವನವನ್ನು ಮುಂದುವರಿಸಿ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅಪ್ಲಿಕೇಶನ್ ಲಿಂಕ್ ಈ ಲೇಖನದ ಕೊನೆಯ ಭಾಗದಲ್ಲಿದೆ. ಆದ್ದರಿಂದ ಅಭ್ಯರ್ಥಿಗಳು ಕೊನೆಯವರೆಗೂ ಓದಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ.

ನೀವು ಅರ್ಹರಾ? ಈಗಲೇ ತಿಳಿದುಕೊಳ್ಳಿ :

UDYAMA SHEELATA TRAINING – ಉದ್ಯಮಶೀಲತಾ ತರಬೇತಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು ಪರಿಶಿಷ್ಟ ಜಾತಿಗೆ ಸೇರಿರಬೇಕು. ಈ ಒಂದು ಯೋಜನೆ ಅಡಿಯಲ್ಲಿ ತರಬೇತಿ ಪಡೆಯಲು ಅಭ್ಯರ್ಥಿಗಳು ಉದ್ಯಮವನ್ನು ಸ್ಥಾಪಿಸಲು ಉದ್ದೇಶ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಇತರೆ ಅರ್ಹತೆಗಳು :

ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 21 ವರ್ಷದಿಂದ 45 ವರ್ಷ ವಯಸ್ಸಿನ ವಯೋಮಿತಿ ಹೊಂದಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಯೋಜನೆಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಅಭ್ಯರ್ಥಿಗಳು ಆಯ್ಕೆಯಾದ ನಂತರ ನೂರಕ್ಕೆ ನೂರರಷ್ಟು ಹಾಜರಾತಿಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. ಇಂತಹ ಉದ್ದೇಶ ಹೊಂದಿದವರು ಮಾತ್ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಅದರ ಜೊತೆಗೆ ಅಭ್ಯರ್ಥಿಗಳು ಯಾವುದಾದರೂ ಒಂದು ವಿಷಯದಲ್ಲಿ ಪದವಿ ಶಿಕ್ಷಣ ಮುಗಿಸಬೇಕು. ಪದವಿ ಮುಗಿಸಿದವರು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಈ ಒಂದು ತರಬೇತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ನೀಡುತ್ತಿದ್ದು, ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಆಂಗ್ಲ ಭಾಷೆಯನ್ನು ಓದಲು ಮತ್ತು ಅರ್ಥೈಸಿಕೊಳ್ಳಲು ಅರ್ಹರಿರಬೇಕು.

ಈ ಯೋಜನೆಯ ಲಾಭಗಳು –

ಉದ್ಯಮಶೀಲತಾ ತರಬೇತಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಆಯ್ಕೆಯಾದ ನಂತರ ಅವರಿಗೆ ಉಚಿತ ವಸತಿ ಜೊತೆಗೆ ಊಟದ ವ್ಯವಸ್ಥೆಯೂ ಕೂಡ ಇದ್ದು, ತರಬೇತಿಯನ್ನು ಪೂರೈಸಿದ ನಂತರ ಪ್ರಮಾಣವಾದ ಪತ್ರವನ್ನು ಪಡೆದಲ್ಲಿ ಅಭ್ಯರ್ಥಿಗಳಿಗೆ ಮಾಸಿಕ 10,000 ರೂಪಾಯಿಯನ್ನು ಶಿಷ್ಯವೇತನದ ರೂಪದಲ್ಲಿ ನೀಡಲಾಗುವುದು.

ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಈಗಾಗಲೇ ಆರಂಭವಾಗಿದ್ದು ಕೊನೆಯ ದಿನಾಂಕವನ್ನು ಕೂಡ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ ಮತ್ತು ಕೊನೆಯ ದಿನಾಂಕದ ಮಾಹಿತಿ ಈ ಕೆಳಗಿದೆ.

  • ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ – 17ನೇ ಜನವರಿ 2024
  • ಅರ್ಜಿ ಸಲ್ಲಿಸಲು ಮುಕ್ತಾಯವಾಗುವ ದಿನಾಂಕ – 31ನೇ ಜನವರಿ 2024.

ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು – ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಸಂಸ್ಥೆಯಲ್ಲಿ ಅರ್ಹತಾ ಪರೀಕ್ಷೆ ನಡೆಸಿ, ಈ ಒಂದು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ 50 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

ಈ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಈ ಕೂಡಲೇ ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆದುಕೊಂಡು ದೊಡ್ಡ ಉದ್ಯಮಿಗಳಾಗಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 👉 :

https://www.scsptsp.karnataka.gov.in/IIMB/Training/TrainingRegistrationKannada.aspx/

Leave a Comment