ವಿವಿಧ ಜಿಲ್ಲೆಗಳ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗಾವಕಾಶ..! Apply Now..!

ವಿವಿಧ ಜಿಲ್ಲೆಗಳ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸುಸ್ವಾಗತ..!

ಪ್ರಸ್ತುತ ಜ್ಞಾನ ಸಮೃದ್ಧಿಯ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!

ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಕೇವಲ 10ನೇ ತರಗತಿ ಪಾಸಾದ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ರಾಜ್ಯ ಸರ್ಕಾರ ಕಲ್ಪಿಸಲಾಗಿದ್ದು ಸೆಪ್ಟಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ ಲಿಂಕ್ ಇಲ್ಲಿದೆ ನೋಡಿ..!

Anganwadi job application last date-

ಸಲ್ಲಿಸಲು ಕೊನೆಯ ದಿನಾಂಕ:

ಈ ಹುದ್ದೆಗಳಿಗೆ ಆಸ್ಟೈನ್ ಮೂಲಕ ಅರ್ಜಿ ಸಲ್ಲಿಸಲು 9 ಸೆಪ್ಟೆಂಬರ್ 2024 ಕೊನೆಯ ದಿನಾಂಕವಾಗಿದೆ.

anganwadi worker eligibility- ಅರ್ಹತೆಗಳು:

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

anganwadi centre job age limit- ಸಲ್ಲಿಸಲು ಇರಬೇಕಾದ ವಯೋಮಿತಿ:

ಕರ್ನಾಟಕ ರಾಜ್ಯದ ಒಟ್ಟು ಮೂರು ಜಿಲ್ಲೆಗಳಲ್ಲಿ 1,112 ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಈ ಕೇಳಗಿನಂತಿದೆ.* ಹಾಸನ ಜಿಲ್ಲೆಯಲ್ಲಿ – 734 ಹುದ್ದೆಗಳು* ಬಳ್ಳಾರಿ ಜಿಲ್ಲೆಯಲ್ಲಿ – 141 ಹುದ್ದೆಗಳು

ದಾವಣಗೆರೆ ಜಿಲ್ಲೆಯಲ್ಲಿ – 237 ಹುದ್ದೆಗಳು

ಅರ್ಜಿ ಸಲ್ಲಿಸಲು ಜಿಲ್ಲಾವಾರು ಕೊನೆಯ ದಿನಾಂಕದ ವಿವರ :* ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 04ನೇ ಸೆಪ್ಟೆಂಬರ್ 2024.

ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 10ನೇ ಸೆಪ್ಟೆಂಬರ್ 2024.* ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 09ನೇ ಸೆಪ್ಟೆಂಬರ್ 2024.

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹೇಗೆ ಸಲ್ಲಿಸಬೇಕು?ಹಾಸನ, ಬಳ್ಳಾರಿ ಹಾಗೂ ದಾವಣಗೆರೆ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ ನೀವು ಯಾವ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರುವಿರೋ ಆ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದ ಮುಂಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸುವ ಲಿಂಕ್:

https://karnemakaone.kar.nic.in/abcd/ApplicationForm_JA_org.aspx

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ಯ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.


anganwadi worker qualification-

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ:-

1) ಕನಿಷ್ಠ P.U.C. ತೇರ್ಗಡೆ ಹೊಂದಿರಬೇಕು. S.S.L.C.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

2) ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ “ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.S.E.R.T.ಯಿಂದ ECCE ಡಿಪ್ಲೊಮಾ ಕೋರ್ಸ್, ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡುವುದು.

anganwadi helper qualification-

ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:-

ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.

anganwadi center job-ಪ್ರಸ್ತುತ ಯಾವೆಲ್ಲ ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ?

1) ದಾವಣಗೆರೆ

2) ವಿಜಯನಗರ

3) ಯಾದಗಿರಿ

4) ಶಿವಮೊಗ್ಗ

5) ಹಾಸನ

6) ಚಿತ್ರದುರ್ಗ

7) ಬೆಳಗಾವಿ

documents for anganwadi worker job- ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:-

1) ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್)

2) ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ

3) ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ

4) ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ.

5) ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ

6) ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)

https://karnemakaone.kar.nic.in/abcd/ApplicationForm_JA_org.aspx

Leave a Comment