10ನೇ ತರಗತಿ ಪಾಸಾದ ಮಹಿಳೆಯರಿಗೆ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮತ್ತೊಂದು ನೇಮಕಾತಿ

ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಎಲ್ಲಾ ಅರ್ಹತೆಗಳನ್ನು ಪರಿಶೀಲಿಸಿಕೊಂಡು ನಂತರ ನೀವು ಅರ್ಹರಿದ್ದರೆ ತಡ ಮಾಡದೆ ಅರ್ಜಿ ಸಲ್ಲಿಸಿ ಸರ್ಕಾರಿ ನೌಕರಿ ನಿಮ್ಮದಾಗಿಸಿಕೊಳ್ಳಿ.

Anganawadi recruitment 2024 :

ಹಲವಾರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಈಗಾಗಲೇ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಒಂದು ಲೇಖನದಲ್ಲಿ ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗಿರುವ ಸಮಗ್ರವಾದ ಮಾಹಿತಿಯನ್ನು ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಿ.

ಒಟ್ಟು ಹುದ್ದೆಗಳು :

ಹಾವೇರಿ ಜಿಲ್ಲೆಯಲ್ಲಿ ಒಟ್ಟು 152 ಹುದ್ದೆಗಳ ಖಾಲಿ ಇವೆ. ಅವುಗಳಲ್ಲಿ ಹುದ್ದೆಗಳ ವಿಂಗಡಣೆ ಈ ಕೆಳಗಿನಂತಿದೆ.

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 39 ಹುದ್ದೆಗಳು ಖಾಲಿ ಇವೆ.
  • ಅಂಗನವಾಡಿ ಸಹಾಯಕಿಯರ ಹುದ್ದೆಗಳು – 113 ಹುದ್ದೆಗಳು ಖಾಲಿ ಇವೆ.
Anganawadi recruitment 2024 – ಅರ್ಹತೆಗಳು

ಕನಿಷ್ಕ PUC ಯಲ್ಲಿ ತೇರ್ಗಡೆ ಹೊಂದಿರಬೇಕು ಅದೇ ರೀತಿ S.S.LC.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಕೋರ್ಸ್‌ ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡುವುದು.

ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:- ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.

ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ S.S.L.C. ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ/ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು ಪ್ರಮಾಣ ಪತ್ರ/ಅಂಕಪಟ್ಟಿಯು ಗರಿಷ್ಠ 625 ಕನಿಷ್ಠ 219 ಅಂಕಗಳನ್ನು ಪರಿಗಣಿಸತಕ್ಕದ್ದು, ಹೊಂದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು

ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ/ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿದ್ದರೂ SSLC ಪರೀಕ್ಷೆಗೆ ಆ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಟ ಹಾಗೂ ಕನಿಷ್ಟ ಅಂಕಗಳು ಹಾಗೂ ಕರ್ನಾಟಕ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಟ ಹಾಗೂ ಕನಿಷ್ಟ ಅಂಕದಲ್ಲಿ ವ್ಯತ್ಯಾಸವಿದ್ದಲ್ಲಿ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸತಕ್ಕದ್ದು.

ಅಂಗನವಾಡಿ ಸಹಾಯಕಿಯರು ಯಾವುದೇ ಭಾಷಾ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೂ ಹಾಗೂ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದರೂ ಸಹಾ ಅವರು ಕನ್ನಡ ಭಾಷೆಯನ್ನು ಪ್ರಥಮ /ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡಿರಬೇಕು. ಹಾಗೂ ಮಾತೃಭಾಷೆ ಕನ್ನಡವಲ್ಲದೇ ಇರುವ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯು ಆಯ್ಕೆ ಸಮಯದಲ್ಲಿ ಸಂದರ್ಶನ ಏರ್ಪಡಿಸಿ ಹಾಗೂ ಅವಶ್ಯವಿದ್ದಲ್ಲಿ ಕನ್ನಡ ಭಾಷೆಯ ಜ್ಞಾನದ ಕುರಿತಂತೆ ಓದಿಸಿ, ಬರೆಸಿ ಅವರ ಕನ್ನಡ ಭಾಷಾ ಜ್ಞಾನವನ್ನು ಪರೀಕ್ಷಿಸಿ ಅವರನ್ನು ಆಯ್ಕೆ ಮಾಡುವ ಬಗ್ಗೆ ಸಮಿತಿಯವರು ನಿರ್ಧರಿಸುವುದು.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕಗಳು – ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ ಜನವರಿ 16, 2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫೆಬ್ರವರಿ 15 , 2024

ಅರ್ಜಿ ಸಲ್ಲಿಸಲು ಆನ್ ಲೈನ್ ಮುಕಾಂತರ ಈ ಕೆಳಗಿನ ಲಿಂಕ್ ಬಳಸಿ ಅರ್ಜಿ ಸಲ್ಲಿಸಿ
Apply online – https://karnemakaone.kar.nic.in/abcd/ApplicationForm_JA_org.aspx

ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಹೊಸ ಟ್ಯಾಬ್ ನಿಮ್ಮ ಮೊಬೈಲ್ ನಲ್ಲಿ ಓಪನ್ ಆಗುತ್ತದೆ ಹಾಗೆಯೇ ಅರ್ಜಿ ಸಲ್ಲಿಸಲು ಬಯಸುವರು ಈ ಮೇಲ್ಕಂಡ ಲಿಂಕ್ ಮೇಲೆ ಕೂಡಲೇ ಕ್ಲಿಕ್ ಮಾಡಿ.  ಈ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಮೊಬೈಲ್ ನಲ್ಲಿ ಒಂದು ಹೊಸ ಟ್ಯಾಬ್ ಓಪನ್ ಆಗುತ್ತದೆ.

ಕೇವಲ ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು 5 ನಿಮಿಷದಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮೊಬೈಲ್ ಒಂದು ಕಂಪ್ಯೂಟರ್ ಕರ್ನಾಟಕ ಸಾಧನವಾಗಿದ್ದು ಕಂಪ್ಯೂಟರ್ನಲ್ಲಿ ಬರುವಂತಹ ಎಲ್ಲಾ ಕೆಲಸಗಳು ಕೂಡ ಈಗ ಮೊಬೈಲ್ ನಲ್ಲಿ ಮಾಡಬಹುದಾಗಿದೆ.

ಅಂಗನವಾಡಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಪಿಕ್ ಮಾಡಿ ಅತಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು, ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೇವಲ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಲಭ್ಯವಿದ್ದು 10ನೇ ತರಗತಿ ಪಾಸಾದ ಮಹಿಳೆಯರು ಅರ್ಜಿ ಸಲ್ಲಿಸಿ..

ಹೀಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ಮುಂದಿನ ಲೇಖನಗಳನ್ನು ಓದಿ ಧನ್ಯವಾದಗಳು.

Leave a Comment