BMTC ಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆಗಾಗಿ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆ ಆರಂಭವಾಗಿದೆ ಬೇಗನೆ ಅರ್ಜಿ ಸಲ್ಲಿಸಿ

ಆತ್ಮೀಯ ಸ್ನೇಹಿತರೆಲ್ಲರಿಗೂ ನಮಸ್ಕಾರಗಳು. ಬೆಂಗಳೂರು ಮಹಾನಗರ ಸಾರಿಗೆ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಇದೀಗ ಉಚಿತ ರಿಯಾಯಿತಿ ದರದಲ್ಲಿ ಬಸ್ ಪಾಸ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು ಈ ಉಚಿತ ಬಸ್ ಪಾಸ್ ಪಡೆಯಲು ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಏನೆಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಬೇಕು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಪ್ರತಿಯೊಬ್ಬರೂ ಇದರ ಒಂದು ಉಪಯೋಗವನ್ನು ಪಡಿಸಿಕೊಂಡು ಬೇಗನೆ ಅರ್ಜಿ ಸಲ್ಲಿಸುವಂತರಾಗಿ.

ನಮ್ಮ ಈ ಒಂದು ಜಾಲತಾಣದಲ್ಲಿ ನಿಮಗೆ ಗೊತ್ತಿರುವ ಹಾಗೆ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಹಾಗೂ ಪ್ರಮುಖ ಮಾಹಿತಿಗಳನ್ನು ಅದೇ ರೀತಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಮಾಹಿತಿಗಳನ್ನು ಕೂಡ ನೀಡುತ್ತಿದ್ದು ಇಂದಿನ ಈ ಒಂದು ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಉಚಿತ ಬಸ್ ಪಾಸ್ ವಿತರಣೆಯ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ.

ಇದರ ಒಂದು ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿ ನಿಮಗೆ ಕೇಳಿಕೊಳ್ಳುತ್ತಿದ್ದೇನೆ. ಇದೇ ರೀತಿ ದಿನನಿತ್ಯ ಉಪಯುಕ್ತ ಮಾಹಿತಿಗಳನ್ನು ನೀವು ಪಡೆದುಕೊಳ್ಳಲು ಬಯಸುವುದಾದರೆ ಇಂದೇ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ.

BMTC bus pass apply:

ಹೌದು ಸ್ನೇಹಿತರೆ, 2024 25 ನೇ ಶೈಕ್ಷಣಿಕ ಸಾಲಿನ ವರ್ಷಕ್ಕೆ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ಅನ್ನು ನೀಡಲು ವಿದ್ಯಾರ್ಥಿಗಳಿಗೆ ಅರ್ಜಿ ಆವನಿಸಲಾಗಿದೆ ಈ ಒಂದು ಅರ್ಜಿಯನ್ನು ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿದ್ದು ಸೇವಾ ಸಿಂಧು ಪೋರ್ಟಲ್ ನಲ್ಲಿ ಇದು ಲಭ್ಯವಿರುತ್ತದೆ.

ಇದಕ್ಕೆ ನೀವು ಅರ್ಜಿ ಸಲ್ಲಿಸಲು ಬೆಳಗ್ಗೆ 8 ರಿಂದ 6:30 ವರೆಗೆ ಎಲ್ಲಾ ದಿನಗಳಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹಾಗೂ ಇತರೆ ಬಸ್ ನಿಲ್ದಾಣಗಳಲ್ಲಿ ಬಸ್ ಪಾಸ್ ಅನ್ನು ವಿತರಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ರಿಯಾಯಿತಿ ದರದ ಬಸ್ ಪಾಸ್ ಪಡೆಯಲಿಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು :

ಒಂದು ರಿಯಾಯಿತಿ ದರದ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲೆಗಳನ್ನು ನಾವು ತಿಳಿದುಕೊಳ್ಳುವುದಾದರೆ ಶಾಲಾ ಕಾಲೇಜುಗಳಿಂದ ಪಡೆದ ವಿಕೃತ ಪತ್ರ ಶಾಲಾ-ಕಾಲೇಜಿನ ಗುರುತಿನ ಚೀಟಿ ಶುಲ್ಕ ರಶೀದಿ ಮತ್ತು ಶಾಲಾ ಮುಖ್ಯಸ್ಥರಿಂದ ದೃಢೀಕರಿಸಿದ ಪತ್ರವನ್ನು ಹಾಜರಿ ಪಡಿಸಬೇಕು.


ಇನ್ನು ವಿದ್ಯಾರ್ಥಿನಿಯರು ಈ ಒಂದು ರಿಯಾಯಿತಿ ದರದ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಬೇಕು ಬೇಡವೋ ಎಂಬ ಸಂಶಯದಲ್ಲಿದ್ದರೆ ನೀವು ತಿಳಿದುಕೊಳ್ಳಬೇಕಾಗುವ ಮಾಹಿತಿ ಏನೆಂದರೆ, ಕರ್ನಾಟಕ ರಾಜ್ಯದಲ್ಲಿ ಸ್ತ್ರೀಶಕ್ತಿ ಯೋಜನೆ ಜಾರಿಯಲ್ಲಿ ಇರುವುದರಿಂದ ಸ್ತ್ರೀಯರು ಅರ್ಜಿ ಸಲ್ಲಿಸಬೇಕಾಗಿಲ್ಲ.

ಇನ್ನು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ, ವಿದ್ಯಾರ್ಥಿಗಳು ಹತ್ತಿರದ ಗ್ರಾಹಕ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಅದೇ ರೀತಿ ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬಯಸುವುದಾದರೆ ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ ನಿಮ್ಮ ಮೊಬೈಲ್ ಮುಖಾಂತರವೇ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುವುದಿಲ್ಲ ಆದ್ದರಿಂದ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Leave a Comment