ಅಗ್ನಿಶಾಮಕ ದಳದಲ್ಲಿ 10ನೇ ತರಗತಿ ಪಾಸಾದವರಿಗೆ ಸುವರ್ಣ ಅವಕಾಶ. ಈಗಲೇ ಅರ್ಜಿ ಸಲ್ಲಿಸಿ….!

10ನೇ ತರಗತಿ ಪಾಸಾದವರಿಗೆ ಫೈರ್ ಮ್ಯಾನ್ ಹುದ್ದೆಗಳು
ಕೇಂದ್ರ ಸರ್ಕಾರದ ಹುದ್ದೆಗಳು ಭರ್ಜರಿ ಅವಕಾಶ ಈಗಲೇ ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ ಬಂಧುಗಳೇ.

ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದು, ಇಂದಿನ ಈ ಲೇಖನದಲ್ಲಿ ಭಾರತ ಸರ್ಕಾರದ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಹುದ್ದೆಗಳ ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕೇಂದ್ರ ಸರ್ಕಾರ ಹುದ್ದೆಗಳಾಗಿದ್ದು, ಕೇಂದ್ರ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವವರಿಗೆ ಉತ್ತಮ ಅವಕಾಶವಾಗಿದೆ. ನೀವು ಕೇಂದ್ರ ಸರಕಾರಿ ನೌಕರಿ ನಿರೀಕ್ಷೆಯಲ್ಲಿದ್ದರೆ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಈ ಹುದ್ದೆಗಳನ್ನು ನಿಮ್ಮದಾಗಿಸಿಕೊಳ್ಳಿ.

ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ –

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿ ಹೀಗಿದೆ :

ರಕ್ಷಣಾ ಸಚಿವಾಲಯದಲ್ಲಿ ಒಟ್ಟು 71 ಹುದ್ದೆಗಳ ಖಾಲಿ ಇದ್ದು, ಸದರಿ ಹುದ್ದೆಗಳ ವಿವರಣೆ ಹೀಗಿದೆ.

* ಅಡುಗೆ ಮಾಡುವರು – 3 ಹುದ್ದೆಗಳು
* ನಾಗರಿಕ ಅಡುಗೆ ಬೋಧಕ – 3 ಹುದ್ದೆಗಳು
* MTS – 2 ಹುದ್ದೆಗಳು
* ಟ್ರೇಡ್ಸ್‌ಮ್ಯಾನ್ ಮೇಟ್ – 8 ಹುದ್ದೆಗಳು
* ವಾಹನ ಮೆಕ್ಯಾನಿಕ್ – 1 ಹುದ್ದೆ
* ನಾಗರಿಕ ಮೋಟಾರ್ ಚಾಲಕ – 9 ಹುದ್ದೆಗಳು
* ಕ್ಲೀನರ್ – 4 ಹುದ್ದೆಗಳು
* ಪ್ರಮುಖ ಅಗ್ನಿಶಾಮಕ – 1 ಹುದ್ದೆ
* ಅಗ್ನಿಶಾಮಕ – 30 ಹುದ್ದೆಗಳು
* ಅಗ್ನಿಶಾಮಕ ಇಂಜಿನ್ ಚಾಲಕ – 10 ಹುದ್ದೆಗಳು

ಅಗ್ನಿಶಾಮಕ ಮತ್ತು ಅಗ್ನಿಶಾಮಕ ಇಂಜಿನ್ ಚಾಲಕ ಹುದ್ದೆಗಳು ಹಾಗೂ ಇತರೆ ಹುದ್ದೆಗಳ ಸೇರಿದಂತೆ ಒಟ್ಟು 71 ಹುದ್ದೆಗಳು ಖಾಲಿ ಇದ್ದು, ಎಲ್ಲಾ ಹುದ್ದೆಗಳಿಗೂ ಬೇರೆ ಬೇರೆ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.

ಎಲ್ಲಾ ಹುದ್ದೆಗಳ ವಿದ್ಯಾರ್ಹತೆಯನ್ನು ನೋಡುವುದಾದರೆ ಈ ಕೆಳಗಿನಂತಿದೆ. ಈ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ನಾವು ಕೆಳಗೆ ನೀಡಿರುವ ವಿದ್ಯಾರ್ಥಿಯನ್ನು ಮತ್ತೊಮ್ಮೆ ಪರಿಶೀಲಿಸಿಕೊಂಡು ಮತ್ತು ಜಾಲತಾಣಕ್ಕೆ ಭೇಟಿ ನೀಡಿ ಅಧಿಕಾರಿ ಸೂಚನೆಯನ್ನು ವಿವರವಾಗಿ ಪರಿಶೀಲಿಸಿಕೊಂಡ ನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ –

* ಅಡುಗೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಭಾರತೀಯ ಆರದ ಅಡಿಗೆಯನ್ನು ಮಾಡುವುದರ ಅನುಭವ ಹೊಂದಿರಬೇಕು. ಈ ಅರ್ಹತೆಯನ್ನು ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

* ನಾಗರಿಕ ಅಡುಗೆ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ಅದಕ್ಕೆ ಸಮಾನವಾದ ವಿದ್ಯಾರ್ಥಿಯನ್ನು ಹೊಂದಿದ್ದು ಸದರಿ ಹುದ್ದೆಗಳಿಗೆ ತಕ್ಕಂತೆ ಅನುಭವ ಹೊಂದಿರುವುದು ಕಡ್ಡಾಯವಾಗಿರುತ್ತದೆ

* MTS ಚೌಕಿದಾರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹತ್ತನೇ ತರಗತಿ ಪಾಸ್ ಆಗಿರಬೇಕು ಮತ್ತು ಅನುಭವವನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.

* ಟ್ರೇಡ್ಸ್ ಮ್ಯಾನ್ ಮೇಟ್ ಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಹುದ್ದೆಗಳಿಗೆ ಅನುಗುಣವಾದ ಅನುಭವವನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.

* ವಾಹನ ಮೆಕ್ಯಾನಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿದ್ದು ಇಂಗ್ಲಿಷ್ ಮತ್ತು ಹಿಂದಿ ಭಾಷೆಯನ್ನು ಓದಲು ಬರೆಯಲು ಬರುವಂತಹ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಉಳಿದ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರೋದು ಕಡ್ಡಾಯವಾಗಿರುತ್ತದೆ ಮತ್ತು ಹುದ್ದೆಗಳಿಗೆ ಅನುಗುಣವಾದ ಸೇವಾನುಭವವನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ ಆದ್ದರಿಂದ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಜಲತಾಣಕ್ಕೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸುವ ಹುದ್ದೆಗಳಿಗೆ ನಿಗದಿಪಡಿಸಿರುವ ಅರ್ಹತೆಯನ್ನು ಮತ್ತೊಮ್ಮೆ ಪರಿಶೀಲಿಸಿಕೊಂಡ ನಂತರ ಅರ್ಜಿ ಸಲ್ಲಿಸಲು ಮುಂದಾಗಿರಿ.

ಹುದ್ದೆಗಳಿಗೆ ಆಯ್ಕೆಯನ್ನು ಹೇಗೆ ಮಾಡಿಕೊಳ್ಳಲಾಗುತ್ತದೆ?

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಅವರ ಅರ್ಹತೆಯನ್ನು ಪರಿಶೀಲಿಸಿ ನಂತರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ದೈಹಿಕ ಪರೀಕ್ಷೆ ಕೌಶಲ್ಯ ಪರೀಕ್ಷೆ ಪ್ರಾಯೋಗಿಕ ಪರೀಕ್ಷೆ ಮತ್ತು ಅಂತಿಮವಾಗಿ ಸಂದರ್ಶನವನ್ನು ನಡೆಸುವುದರ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿಯನ್ನು ಹೇಗೆ ಸಲ್ಲಿಸಬೇಕು –

ನೀವು ಅರ್ಜಿ ಸಲ್ಲಿಸುವ ಹುದ್ದೆಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಮತ್ತು ಇತರೆ ಅರ್ಹತೆಗಳನ್ನು ಪರಿಶೀಲಿಸಿದ ನಂತರ ನೀವು ಅರ್ಹರೆನಿಸಿದರೆ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿ ಕಳುಹಿಸಿ.

Address –

ಪ್ರಿಸೈಡಿಂಗ್ ಅಧಿಕಾರಿ, ನಾಗರಿಕ ನೇರ ನೇಮಕಾತಿ ಮಂಡಳಿ, CHQ, ASC ಕೇಂದ್ರ (ದಕ್ಷಿಣ) – 2 ATC, ಆಗ್ರಾಮ್ ಪೋಸ್ಟ್, ಬೆಂಗಳೂರು-07

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜನವರಿ 20, 2024 ರಂದು ಆರಂಭವಾಗಲಿದೆ ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಫೆಬ್ರವರಿ 10, 2024 ರಂದು ಮುಕ್ತಾಯಗೊಳ್ಳುವುದು. ಆದ್ದರಿಂದ ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಮುಂಚೆ ಅರ್ಜಿ ಸಲ್ಲಿಸಿ.

ನೇಮಕಾತಿ ಇಲಾಖೆ ಲಿಂಕ್

https://mod.gov.in/

Leave a Comment