ಸರ್ಕಾರಿ ಉದ್ಯೋಗಕ್ಕಾಗಿ ನಿರೀಕ್ಷೆಯಲ್ಲಿ ಇರುವವರಿಗೆ ಉದ್ಯೋಗ ಮೇಳದಲ್ಲಿ ಸುವರ್ಣ ಅವಕಾಶ…! ಈಗಲೇ ಅರ್ಜಿ ಸಲ್ಲಿಸಿ ಸರ್ಕಾರದ ವಿವಿಧ ಇಲಾಖೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಿ…!

ಎಲ್ಲರಿಗೂ ನಮಸ್ಕಾರ ಬಂಧುಗಳೇ

ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಾರ್ವಜನಿಕರಿಗೆ ಹಾಗೂ ರೈತರಿಗೆ ಸೇರಿದಂತೆ ವಿದ್ಯಾರ್ಥಿಗಳಿಗೂ ಕೂಡ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ನಿರುದ್ಯೋಗಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡಲಿದ್ದೇವೆ.

ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗ ನಿರ್ಮೂಲನೆ ( Unemployment ) ಮಾಡಲು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಇದೀಗ ಸರ್ಕಾರವು ನಿರುದ್ಯೋಗ ನಿರ್ಮೂಲನೆ ಮಾಡಲು ಬೃಹತ್ ಉದ್ಯೋಗ ಮೇಳವನ್ನು ಕೈಗೊಳ್ಳಲು ನಿರ್ಧರಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗವನ್ನು ದೊರಕಿಸಲು ಸಹಾಯವಾಗುವಂತೆ ಶೀಘ್ರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಕೈಗೊಳ್ಳಲು ನಿರ್ಧರಿಸಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯು ಈ ಕೆಳಗಿನ ಅಂಕಣದಲ್ಲಿದ್ದು ಎಲ್ಲರೂ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಇದರ ಪ್ರಯೋಜನವನ್ನು ಪಡೆದುಕೊಳ್ಳಿ.

ಕರ್ನಾಟಕ ರಾಜ್ಯ ಸರ್ಕಾರದ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಐಟಿ – ಬಿಟಿ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ನಾಗೇಂದ್ರ, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಸೇರಿದಂತೆ ಸಚಿವರ ತಂಡವನ್ನು ರಚಸಿದ್ದು ನಿರುದ್ಯೋಗಿಗಳಿಗೆ ಸಹಾಯವಾಗುವಂತೆ ಸಭೆ ನಡೆಸಿ ಬೃಹತ್ ಉದ್ಯೋಗ ಮೇಳವನ್ನು ನಡೆಸಲು ಹಾಗೂ ಈ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಬಯಸುವಂತಹ ಅಭ್ಯರ್ಥಿಗಳ ಭಾಗವಹಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ರಾಜ್ಯ ದೇಶದಲ್ಲಿ ಮಾತ್ರವಲ್ಲದೆ ಕನ್ನಡಿಗರು ವಿದೇಶದಲ್ಲಿಯೂ ಕೂಡ ಉದ್ಯೋಗವನ್ನು ಪಡೆಯಬೇಕು ಎಂಬ ಗುರಿಯನ್ನು ಹೊಂದಿದ್ದು, ನಿರುದ್ಯೋಗಿಗಳಿಗೆ ಬೇಕಾಗಿರುವಂತಹ ಕೌಶಲ್ಯಗಳನ್ನು ನೀಡಿ, ಉದ್ಯೋಗಗಳಿಗೆ ಸಂಬಂಧಿಸಿದಂತ ಕೌಶಲ್ಯವನ್ನು ಕಲಿಯುವಂತೆ ಮಾಡಿ ಅವರಿಗೆ ವಿದೇಶದಲ್ಲಿ ಉದ್ಯೋಗ ದೊರೆಯುವಂತೆ ಮಾಡುವುದು ಸರ್ಕಾರದ ಗುರಿಯಾಗಿದ್ದು ಶೀಘ್ರದಲ್ಲಿಯೇ ಎಲ್ಲಾ ರೀತಿಯ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ನಿರ್ಧರಿಸಿದ್ದಾರೆ.

ಸರ್ಕಾರದಿಂದ ಜಾರಿಯಾದ ಹೊಸ ವ್ಯವಸ್ಥೆಯಾದ ಸ್ಕಿಲ್ ಡೆವಲಪ್ಮೆಂಟ್ ಯೋಜನೆಗೆ ಈಗಾಗಲೇ 80,000 ದಷ್ಟು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಕೈಗಾರಿಕಾ ಸಚಿವರಾದ ಎಂ ಬಿ ಪಾಟೀಲ್ ರವರು ತಿಳಿಸಿದ್ದಾರೆ. ಎಲ್ಲ ಅರ್ಹ ಫಲಾನುಭವಿಗಳಿಗೆ ಶೀಘ್ರದಲ್ಲಿ ಸ್ಕಿಲ್ ಡೆವಲಪ್ಮೆಂಟ್ ತರಗತಿಗಳನ್ನು ನೀಡಲಾಗುವುದು.

ಬೃಹತ್ ಉದ್ಯೋಗ ಮೇಳ ಯಾವಾಗ ನಡೆಯುತ್ತದೆ : ಕರ್ನಾಟಕ ರಾಜ್ಯ ಸರ್ಕಾರವು ಹಮ್ಮಿಕೊಳ್ಳುತ್ತಿರುವ ಬೃಹತ್ ಉದ್ಯೋಗ ಮೇಳವು ಇದೇ ತಿಂಗಳು ಫೆಬ್ರವರಿ 26 ರಿಂದ 27 ರವರೆಗೆ ನಡೆಯಲಿದೆ. ಈ ಒಂದು ಉದ್ಯೋಗ ಮೇಳವು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿಗದಿಪಡಿಸಿದ ದಿನಾಂಕದಂದು ನಡೆಯಲಿದೆ.

How to register? ನೋಂದಣಿ ಹೇಗೆ ಮಾಡಬೇಕು

ಕರ್ನಾಟಕ ಸರ್ಕಾರದಿಂದ ನಡೆಯಲಿರುವ ಬೃಹತ್ ಉದ್ಯೋಗ ಮೇಳಕ್ಕೆ ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು ಸ್ಕಿಲ್ ಕನೆಕ್ಟ್ ವೆಬ್ ಸೈಟ್ ಗೆ (Skill connect website) ಭೇಟಿ ನೀಡಿ ನೋಂದಣಿ ಮಾಡಬಹುದಾಗಿದೆ. ಈ ಒಂದು ಉದ್ಯೋಗ ಮೇಳವನ್ನು ಅಚ್ಚು ಕಟ್ಟಾಗಿ ನಡೆಸಲು ಸರ್ಕಾರವು ಈಗಾಗಲೇ ಆರು ಸಚಿವರನ್ನೊಳಗೊಂಡ ತಂಡವನ್ನು ರಚನೆ ಮಾಡಿದೆ. ಈ ಕೆಳಗಿನ ಲಿಂಕ್ ಬಳಸಿ ಸರ್ಕಾರದ ಬೃಹತ್ ಉದ್ಯೋಗ ಮೇಳಕ್ಕೆ ಈಗಲೇ ನೋಂದಣಿ ಮಾಡಿಕೊಳ್ಳಿ.

https://skillconnect.kaushalkar.com/

Leave a Comment