ರೇಷನ್ ಕಾರ್ಡ್ ಕ್ಯಾನ್ಸಲೇಷನ್!
ಬಿಪಿಎಲ್ ಮತ್ತು APL ರೇಷನ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೆ ನೀಡಲಾಗುತ್ತದೆ. ಇದರಿಂದ ಸರ್ಕಾರದ ಯೋಜನೆಯ ಪ್ರಯೋಜನಗಳು ಹಾಗೂ ಉಚಿತ ಪಡಿತರ ಪಡೆದುಕೊಳ್ಳಲು ಸಾಧ್ಯವಿದೆ.
ಆದರೆ ಇಂದು ಅದೇಷ್ಟೋ ಅರ್ಹ ಕುಟುಂಬಗಳು ಕೂಡ ಬಿಪಿಎಲ್ ಪಡಿತರ ಕಾರ್ಡ್ ಪಡೆದುಕೊಂಡಿರುವುದು ನಿಜಕ್ಕೂ ವಿಷಾದನೀಯ! ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಇರುವವರಿಗೆ ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲು ತೀರ್ಮಾನಿಸಿದ್ದು ಅನರ್ಹರ ರೇಷನ್ ಕಾರ್ಡ್ ರದ್ದುಪಡಿ ಮಾಡುತ್ತಿದೆ.
ಈಗಾಗಲೆ ಲಕ್ಷಾಂತರ ಜನರ ರೇಷನ್ ಕಾರ್ಡ್ ರದ್ದುಪಡಿ ಮಾಡಲಾಗಿದೆ. ಪ್ರತಿ ತಿಂಗಳು ರದ್ದುಪಡಿಗೊಂಡಿರುವ ರೇಷನ್ ಕಾರ್ಡ್ ಲಿಸ್ಟ್ ಅನ್ನು ಆಹಾರ ಇಲಾಖೆಯ ಅಧಿಕೃತ ವೆಬ್ಬೆಟ್ನಲ್ಲಿ ಬಿಡುಗಡೆ .
https://ahara.kar.nic.in/
& ವೆಬ್ ಸೈಟ್ ನಲ್ಲಿ ನೀವು ಈ ಸರ್ವಿಸ್ ವಿಭಾಗದಲ್ಲಿ ಪಡಿತರ ಚೀಟಿ ರದ್ದಾಗಿರುವ ಬಗ್ಗೆ ಮಾಹಿತಿ ಪಡೆಯಬಹುದು.
ರೇಷನ್ ಕಾರ್ಡ್ (Ration Card) ಕೂಡ ಇಂದು ಆಧಾರ್ ಕಾರ್ಡ್ (Aadhaar Card) ಹಾಗೂ ಇತರ ದಾಖಲೆಗಳಂತೆ ಪ್ರಮುಖ ದಾಖಲೆಯಾಗಿ ಗುರುತಿಸಿಕೊಂಡಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಪಡಿತರ ಚೀಟಿ ಬಹಳ ಮುಖ್ಯವಾಗಿರುವ ದಾಖಲೆ ಆಗಿದೆ.
ಇದರಿಂದಾಗಿ ಪ್ರತಿಯೊಬ್ಬರು ಅದರಲ್ಲೂ ವಿಶೇಷವಾಗಿ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಅನ್ನೇ ಪಡೆದುಕೊಳ್ಳಲು ಬಯಸುತ್ತಿದ್ದಾರೆ. ಸರ್ಕಾರ ಇದೀಗ ಗುಡ್ ನ್ಯೂಸ್ ನೀಡಿದ್ದು ಹೊಸ ಪಡಿತರ ಚೀಟಿ ವಿತರಣೆ ಮಾಡುವ ದಿನಾಂಕವನ್ನು ಘೋಷಣೆ ಮಾಡಿದೆ.

ರಾಜ್ಯ ಆಹಾರ ಸಚಿವ ಕೆಎಚ್ ಮುನಿಯಪ್ಪ ಇತ್ತೀಚಿಗೆ ಪ್ರತಿಪಕ್ಷದ ನಾಯಕ ಆರ್ ಅಶೋಕ ಹಾಗೂ ಕಾಂಗ್ರೆಸ್ ನಾಯಕಿ ನಯನ ಮೊಟಮ್ಮ ಅವರು ಕೇಳಿದ ಪ್ರಶ್ನೆಗಳಿಗೆ ವಿಚಾರದ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಸರ್ಕಾರಕ್ಕೆ 2.96 ಲಕ್ಷ ಪಡಿತರ ಚೀಟಿ ಅರ್ಜಿಗಳು ಸಲ್ಲಿಕೆ ಆಗಿವೆ.
ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದೆ. ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರು, 10,04,716 ಮಂದಿ 1.20 ಲಕ್ಷ ರೂ.ಗೂ ಅಧಿಕ ಆದಾಯ ಹೊಂದಿರುವವರು, 4,036 ಮಂದಿ ಸರ್ಕಾರಿ ನೌಕರರಿರುವುದು ಇಲಾಖೆಯ ದಾಖಲೆಯಲ್ಲಿದೆ.
ದಶಕಗಳಿಂದೀಚೆಗೆ ಬಿಪಿಎಲ್ ಕಾರ್ಡ್ ರಾಜ್ಯಾದ್ಯಂತ ವಿಪರೀತ ಏರಿಕೆಯಾಗಿದ್ದು, ಇದು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ತಿಂಗಳಿಗೆ ಕೋಟ್ಯಂತರ ರೂ. ಹೊರೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಅಕ್ರಮ ಬಿಪಿಎಲ್ ಕಾರ್ಡ್ಗಳ ಪತ್ತೆಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.
ಯಾವುದೇ ಕುಟುಂಬದಲ್ಲಿ ಸರ್ಕಾರಿ , ಅರೆ ಸರ್ಕಾರಿ ನೌಕರರಿದ್ದಲ್ಲಿ, ತೆರಿಗೆ ಪಾವತಿದಾರರಿದ್ದಲ್ಲಿ, 4 ಚಕ್ರದ ಬಿಳಿ ಬೋರ್ಡ್ ವಾಹನ ಹೊಂದಿದವರು, ಆದಾಯ ತೆರಿಗೆ ಪಾವತಿಸುವ ಕುಟುಂಬ, ಒಂದೇ ಮನೆಯಲ್ಲಿ ವಾಸವಿದ್ದು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದ್ದರೆ, 7.5 ಎಕರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿದ್ದರೆ, ವಾರ್ಷಿಕ 1,20,000 ರೂ.ಗಿಂತ ಹೆಚ್ಚು ಆದಾಯ ಹೊಂದಿದ್ದರೆ, ನಗರ ಪ್ರದೇಶದಲ್ಲಿ 1,000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವ ಕುಟುಂಬ ಬಿಪಿಎಲ್ ಪಡೆಯಲು ಅವಕಾಶವಿಲ್ಲ. ಈ ಮಾನದಂಡ ಉಲ್ಲಂಘಿಸಿ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಇದರಲ್ಲಿ ರಾಜ್ಯ, ಕೇಂದ್ರ ಸರ್ಕಾರಿ ನೌಕರರು, ಅರೆ ಸರ್ಕಾರಿ ನೌಕರರು ಅಕ್ರಮವಾಗಿ ಬಿಪಿಎಲ್ ಪಡೆಯುತ್ತಿರುವುದು ಪತ್ತೆಯಾಗಿದೆ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಪಡೆದ ಜಿಲ್ಲೆಗಳ ಪೈಕಿ ಕಲಬುರಗಿ ಜಿಲ್ಲೆ (78,058 ) ಯಲ್ಲಿ ಅತಿ ಹೆಚ್ಚಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಅತೀ ಕಡಿಮೆ (8,346) ಸಂಖ್ಯೆ ಹೊಂದಿದೆ. ರಾಜ್ಯದಲ್ಲಿ 50 ಸಾವಿರಕ್ಕೂ ಅಧಿಕ ಅಕ್ರಮ ಬಿಪಿಎಲ್ ಕಾರ್ಡ್ ಇರುವ ಜಿಲ್ಲೆಗಳಲ್ಲಿ ಬೆಳಗಾವಿ, ಬೆಂಗಳೂರು, ಬೀದರ್, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕಲಬುರಗಿ, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿವೆ. 10 ಸಾವಿರಕ್ಕಿಂತ ಕಡಿಮೆ ಅಕ್ರಮ ಬಿಪಿಎಲ್ ಕಾರ್ಡ್ ಪಡೆದ ಜಿಲ್ಲೆಗಳಲ್ಲಿ ಬೆಂಗಳೂರು ಪೂರ್ವ, ಚಿಕ್ಕಬಳ್ಳಾಪುರ, ಕೊಪ್ಪಳ, ಯಾದಗಿರಿ ಜಿಲ್ಲೆಗಳಿವೆ.
ಅಕ್ರಮ ಕಾರ್ಡ್ ಪಡೆದವರಲ್ಲಿ 4,036 ಮಂದಿ ಸರ್ಕಾರಿ ಉದ್ಯೋಗಿಗಳಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 369 ಸರ್ಕಾರಿ ಉದ್ಯೋಗಿಗಳು ಅಕ್ರಮವಾಗಿ ಬಿಪಿಎಲ್ ಪಡೆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಮಂದಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಬಾಗಲಕೋಟೆ, ಬೆಳಗಾವಿ, ಬೆಂಗಳೂರು, ಕಲಬುರಗಿ, ರಾಯಚೂರು, ತುಮಕೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ತಲಾ 150ಕ್ಕೂ ಅಧಿಕ ಸರ್ಕಾರಿ ಉದ್ಯೋಗಿಗಳು ಅಕ್ರಮವಾಗಿ ಬಿಪಿಎಲ್ ಪಡೆದಿದ್ದಾರೆ.