ಕರ್ನಾಟಕ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ಜರಿ ಉದ್ಯೋಗಾವಕಾಶ..! Apply Now..!

ಜ್ಞಾನ ಸಮೃದ್ಧಿಯ ಹಸಲೇಖನಕ್ಕೆ ಸ್ವಾಗತ..!

ಈ ನಮ್ಮ ಜ್ಞಾನ ಸಮೃದ್ಧಿಯ ಪ್ರತಿನಿತ್ಯ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಜ್ಞಾನ ಸಮೃದ್ಧಿಯ ಲೇಖನದಲ್ಲಿ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ.

ಕರ್ನಾಟಕ ಆದಾಯ ಇಲಾಖೆ ನೇಮಕಾತಿ 2024 ರಲ್ಲಿ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ,

ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ಹೆಸರು:ಗ್ರಾಮ ಲೆಕ್ಕಾಧಿಕಾರಿ ಒಟ್ಟು ಹುದ್ದೆಗಳು 1000ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಯೋಮಿತಿ:
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನಶ್ರೇಣಿ:
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
• ಪ.ಜಾತಿ/ಪ.ಪಂ/ಪ್ರ1/ ಅಭ್ಯರ್ಥಿಗಳು ರೂ. 500/-
• 2ಎ,2ಬಿ,3ಎ,3ಬಿ, ಅಭ್ಯರ್ಥಿಗಳು ರೂ. 750/-
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

https://cetonline.karnataka.gov.in/kea/vacrec24
Karnataka Revenue Department Recruitment 2024 –

ಕರ್ನಾಟಕ ಆದಾಯ ಇಲಾಖೆ ನೇಮಕಾತಿ 2024 ರಲ್ಲಿ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು

Leave a Comment