Labour Card Scholarship: ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ!
ನಮಸ್ಕಾರ ಎಲ್ಲರಿಗೂ, ಈ ಲೇಖನದಲ್ಲಿ ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕು? ಮತ್ತು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ? ಹಾಗೂ ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ? ಎಂಬ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಆದ ಕಾರಣ ಲೇಖನವನ್ನು ಕೊನೆಯವರೆಗೂ ಓದಿ.
ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನ:
ಲೇಬರ್ ಕಾರ್ಡನ್ನು ಹೊಂದಿರುವಂತಹ ಕಾರ್ಮಿಕರ ಮಕ್ಕಳಿಗೆ ಒಂದು ಗುಡ್ ನ್ಯೂಸ್ ಹಿಂದೆ ಹೇಳಬಹುದು ಯಾಕೆಂದರೆ ರಾಜ್ಯದಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮತ್ತು 11,000 ವರೆಗೆ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳುವ ಅವಕಾಶವಿರುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು:
• ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು.
• ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಪೋಷಕರು ಕರ್ನಾಟಕ ಸರ್ಕಾರದ ಕಾರ್ಮಿಕ ಕಲ್ಯಾಣ ಇಲಾಖೆಯ ನೊಂದಾಯಿತ ಕಟ್ಟಡ ಕಾರ್ಮಿಕರಾಗಿರಬೇಕು.
• ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ 50% ಅಂಕವನ್ನು ಗಳಿಸಿರಬೇಕು.
• ವಿದ್ಯಾರ್ಥಿಯ ಪೋಷಕರ ಲೇಬರ್ ಕಾರ್ಡ್ ಚಾಲ್ತಿಯಲ್ಲಿರಬೇಕು.
• ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ 35,000 ಕ್ಕಿಂತ ಕಡಿಮೆ ಇರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
• ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣ ಪತ್ರ
• ಶುಲ್ಕ ತುಂಬಿದ ರಶೀದಿ
• ಹಿಂದಿನ ವರ್ಷದ ಅಂಕಪಟ್ಟಿ
• ಬ್ಯಾಂಕ್ ಪಾಸ್ ಬುಕ್ ವಿವರಗಳು
• ಮೊಬೈಲ್ ನಂಬರ್
ನೀವೇನಾದರೂ ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ, ಹಾಗೂ ನಿಮ್ಮ ಪೋಷಕರು ಲೇಬರ್ ಕಾರ್ಡನ್ನು ಹೊಂದಿದ್ದರೆ, ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ, ಈ ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ನೀವು ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ 11,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಲು ಅವಕಾಶವನ್ನು ಪಡೆಯಬಹುದಾಗಿದೆ.
Application Link : Apply Now
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 31-1-2025 ಆಗಿತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ. ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವಾ ಕೇಂದ್ರಗಳಿಗೆ ಅಗತ್ಯ ದಾಕಲೆಗಳೊಂದಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
https://klwbapps.karnataka.gov.in/student/login