ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಮಂಡ್ಯ ಜಿಲ್ಲಾ ನ್ಯಾಯಾಲಯವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಯಾರು ಎಂಬ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೂ ಕೂಡಲೇ ಮಾಹಿತಿಯನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಿ.
Mandya District Court Recruitment : ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಸಾರ್ವಜನಿಕರಿಗೆ ಸಹಾಯವಾಗುವಂತೆ ಹಲವಾರು ವಿಷಯಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ.
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾರ್ಯಾರರು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಿದ್ದು ಪ್ರತಿಯೊಬ್ಬರು ಇದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಸದುಪಯೋಗಪಡಿಸಿಕೊಳ್ಳಿ.
ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 41 ಜವಾನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಎಂಬ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ನೀವು ಅರ್ಹರೆ? ಎಂಬ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ :
ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು.
ಈ ಒಂದು ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಉತ್ತಮ ಮಾಸಕ ವೇತನವನ್ನು ನೀಡಲಾಗುತ್ತದೆ. ಮಾಸಕ ವೇತನವು ಸರ್ಕಾರಿ ನಿಯಮಗಳ ಅನುಸಾರ ನೀಡುತ್ತಿದ್ದು ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಮಾಸಿಕ 17,000 ರೂಪಾಯಿಯಿಂದ 28950 ರೂ. ಯನ್ನು ನೀಡಲಾಗುತ್ತದೆ ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
Mandya District Court Recruitment – ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವ ವಯೋಮಿತಿಯ ಅಭ್ಯರ್ಥಿಗಳು ಅರ್ಹರು?
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಂಡ್ಯ ಜಿಲ್ಲಾ ನ್ಯಾಯಾಲಯವು ಹೊರಡಿಸಿರುವ ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷದ ಒಳಗಿರಬೇಕು ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಅನ್ವಯವಾಗಲಿದೆ ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಶುಲ್ಕ :
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು : 300ರೂ.
- ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ : 150ರೂ.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ, ಆದ್ದರಿಂದ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ? ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವುದರ ಮುಖಾಂತರ ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ ನಂತರ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿ : https://recruitmenthck.kar.nic.in/district/mdy/gdp/home.php