BPL ಕಾರ್ಡ್ ದಾರರಿಗೆ ಹೊಸ ಬಿಗ್ ಅಪ್ಡೇಟ್ ನೀಡಿದ ಕರ್ನಾಟಕ ಸರ್ಕಾರ : BPL ದಾರರು ಈ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು

BPL ಕಾರ್ಡ್ ದಾರರಿಗೆ ಹೊಸ ಬಿಗ್ ಅಪ್ಡೇಟ್ ನೀಡಿದ ಕರ್ನಾಟಕ ಸರ್ಕಾರ : BPL ದಾರರು ಈ ಮಾಹಿತಿಯನ್ನು ತಿಳಿದುಕೊಳ್ಳಲೇಬೇಕು

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರು ಮತ್ತು ರೇಷನ್ ತಿದ್ದುಪಡಿಗೆ ಅರ್ಜಿ ಸಲ್ಲಿಸಿದಂತಹ ಪಡಿತರದಾರರಿಗೆ ಕರ್ನಾಟಕ ಸರ್ಕಾರವು ಹೊಸ ಬಿಗ್ ಅಪ್ಡೇಟ್ ನೀಡಿದ್ದು ಈ ಮಾಹಿತಿಯನ್ನು ನೀವು ತಿಳಿದುಕೊಳ್ಳಲೇಬೇಕು.

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ. ನಮ್ಮ ಈ ಜ್ಞಾನಸಮೃದ್ಧಿ  ಜಾಲತಾಣದಲ್ಲಿ ನಾವು ದಿನನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಬಿಪಿಎಲ್ ಪಡಿತರದಾರರಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡಲಿದ್ದೇವೆ. ಸಂಪೂರ್ಣ ಮಾಹಿತಿಯಾಗಿ ಲೇಖನದ ಕೊನೆಯ ಭಾಗದವರೆಗೂ ಓದಿ ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೆ ಹಂಚಿಕೊಳ್ಳಿ.

ಸರ್ಕಾರದಿಂದ ಲಭ್ಯವಿರುವ ಹಲವಾರು ಯೋಜನೆಗಳ ಲಾಭವನ್ನು ಪಡೆಯಲು ಅತಿ ಮುಖ್ಯವಾಗಿ ಬೇಕಾಗಿರುವುದು ರೇಷನ್ ಕಾರ್ಡ್ ಅದರಲ್ಲೂ ಮುಖ್ಯವಾಗಿ ಬಿಪಿಎಲ್ ಕಾರ್ಡ್. ಗ್ಯಾರಂಟಿ ಯೋಜನೆಗಳು ಜಾರಿಗೆ ಆದ ನಂತರ ಬಿಪಿಎಲ್ ಕಾರ್ಡ್ ಮಹತ್ವ ಹೆಚ್ಚಿದೆ. ನಿಮ್ಮ ಬಳಿ ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಹಲವಾರು ಯೋಜನೆಗಳಿಂದ ವಂಚಿತರಾಗುತ್ತೀರಿ. ಇಂಥವರಿಗೆ ಸರ್ಕಾರವು ಸಿಹಿ ಸುದ್ದಿಯನ್ನು ನೀಡಿದ್ದು, ಹೊಸ ರೇಷನ್ ಕಾರ್ಡ್ ವಿತರಣೆಗಾಗಿ ದಿನಾಂಕವನ್ನು ಘೋಷಿಸಿದೆ.

ಹೊಸ ರೇಷನ್ ಕಾರ್ಡ್ ( New ration card application )

2020ರಲ್ಲಿಯೇ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ, ಹೊಸ ರೇಷನ್ ಕಾರ್ಡ್ ಪಡೆಯಲು ಕಾಯುತ್ತಿರುವವರಿಗೆ ಇದು ನಿಟ್ಟುಸಿರು ಬಿಡುವಂತಾಗಿದೆ. ಕರ್ನಾಟಕ ರಾಜ್ಯದ ಆಹಾರ ಇಲಾಖೆ ಸಚಿವರಾದಂತಹ ಕೆಎಚ್ ಮುನಿಯಪ್ಪನವರ ಈ ಬಗ್ಗೆ ಮಾಹಿತಿ ನೀಡಿದ್ದು ಮಾರ್ಚ್ 31ನೇ ತಾರೀಖಿನ ಒಳಗಾಗಿ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡುವುದಾಗಿ ಜನರಿಗೆ ಭರವಸೆ ಮೂಡಿಸಿದ್ದಾರೆ.

ಇಂಥವರಿಗೆ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅವಕಾಶ :

• ಇತ್ತೀಚಿಗೆ ಹೊಸದಾಗಿ ಮದುವೆಯಾದ ನಂತರ ಹೊಸದಾಗಿ ಸಂಸಾರವನ್ನು ಆರಂಭಿಸುವಂತಹ ದಂಪತಿಗಳು ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 
• ಮದುವೆಯಾದ ನಂತರ ಕೂಡು ಕುಟುಂಬದಿಂದ ಪ್ರತ್ಯೇಕವಾಗಿದ್ದರೆ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತೀರಿ.

ತಿದ್ದುಪಡಿಗೂ ಅವಕಾಶ  :
ಈಗಾಗಲೇ ಹಲವರ ಹತ್ತಿರ ರೇಷನ್ ಕಾರ್ಡ್ ಇದ್ದು ಕೆಲವೊಂದು ಕಾರಣಗಳಿಂದ ಸರ್ಕಾರದ ಯೋಜನೆಗಳ ಸಂಪೂರ್ಣ ಲಾಭವನ್ನು ಪಡೆಯಲಾಗುತ್ತಿಲ್ಲ. ಪಡಿತರ ಚೀಟಿಯಲ್ಲಿ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ ಹಾಗೂ ತಪ್ಪುಗಳ ತಿದ್ದುಪಡಿಗೆ ಅವಕಾಶವನ್ನು ನೀಡಿದ್ದು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೊಸ ರೇಷನ್ ಕಾರ್ಡ್ ಪಡೆಯುವುದು ಹೇಗೆ?
ಒಂದು ವೇಳೆ ನೀವು ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವುದಾದರೆ ನಿಮ್ಮ ಹತ್ತಿರವಿರುವ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಗ್ರಾಹಕ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Leave a Comment