ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ..!
ಸಮಸ್ತ ಕರ್ನಾಟಕದ ಜನತೆಗೆ ಪ್ರಣಾಮಗಳು..!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನವೇ ಮಳೆ ಆರಂಭವಾಗಿತ್ತು. ತುಂತುರು ಮಳೆಗೆ ವಾಹನ ಸವಾರರು ಪರದಾಡಿದ್ದರು. ಇನ್ನು ಈ ಮಧ್ಯೆ ಅಕ್ಟೋಬರ್ 9ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.
ಬೆಂಗಳೂರು, ಅಕ್ಟೋಬರ್ 03: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮಳೆ (Rain) ಆಗುತ್ತಿದೆ. ಇಂದು ಮಧ್ಯಾಹ್ನ ಆಗುತ್ತಿದ್ದಂತೆ ಸಿಟಿ ಮಂದಿಗೆ ವರುಣನ ದರ್ಶನವಾಗಿತ್ತು. ಅಕ್ಟೋಬರ್ ಮೊದಲ ವಾರದಲ್ಲೇ ಹವಾಮಾನ ಇಲಾಖೆ ಮಳೆ ಎಚ್ಚರಿಕೆ ನೀಡಿದ್ದು, ಅಕ್ಟೋಬರ್ 9ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ತಿಳಿಸಿದೆ.
ಈ ಬಗ್ಗೆ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದು, ಇಂದಿನಿಂದ ಅ.7ರವರೆಗೆ ಬೆಂಗಳೂರಲ್ಲಿ ಸಾಧಾರಣ ಮಳೆ ಇರಲಿದೆ. ಅ.4, 5ರಂದು ಬೆಂಗಳೂರು, ರಾಮನಗರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಕೋಲಾರ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 9ರವರೆಗೆ ಕರಾವಳಿಯ ಕೆಲವೆಡೆ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಶೆಟ್ಟಿಹಳ್ಳಿ ಶ್ರೀದೇವಿ ಬಡಾವಣೆಯಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಮನೆಗಳಲ್ಲಿ ನೀರು, ಕೆಸರು ತುಂಬಿದ್ದು, ಮನೆಗಳನ್ನು ಸ್ವಚ್ಛಗೊಳಿಸಲು ಮನೆ ಮಾಲೀಕರ ಹರಸಾಹಸ ಪಟ್ಟಿದ್ದಾರೆ. ಮನೆಯಲ್ಲಿರುವ ಸಂಪ್ಗಳು ಮಳೆ ನೀರಿಗೆ ಭರ್ತಿಯಾಗಿ ನಿವಾಸಿಗಳು ಗೋಳಾಡಿದ್ದಾರೆ. ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಟಿವಿ9 ಮುಖಾಂತರ ಅಕ್ರೋಶ ವ್ಯಕ್ತಪಡಿಸಿದ್ದಾರೆ.