ಗ್ರಾಮ ಪಂಚಾಯಿತಿ ನೇಮಕಾತಿ : PUC ಪಾಸಾದವರಿಗೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ಜರಿ ನೇಮಕಾತಿ…! ಈಗಲೇ ಅರ್ಜಿ ಸಲ್ಲಿಸಿ…!

ಗ್ರಾಮ ಪಂಚಾಯಿತಿ ನೇಮಕಾತಿ : PUC ಪಾಸಾದವರಿಗೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ಜರಿ ನೇಮಕಾತಿ
Gram panchayat recruitment

ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ, ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಮಾಹಿತಿಯನ್ನು ಪ್ರತಿನಿತ್ಯ ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು ಉದ್ಯೋಗ ಹುಡುಕುತ್ತಿರುವ ಯುವಜನರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು, ಈ ಲೇಖನದಲ್ಲಿ ನಾವು ಶಿವಮೊಗ್ಗ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಬಗ್ಗೆ ಮಾಹಿತಿ ತಿಳಿಸಲಿದ್ದೇವೆ.

Gram panchayat recruitment :
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಈ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಖಾಲಿ ಇರುವ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟಾರೆ 14 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಒಟ್ಟಾರೆ 14 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳೆ ಸರಿ ಏನೆಂದು ನೋಡುವುದಾದರೆ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನೆಂದು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿನಂತೆ ವಿದ್ಯಾರ್ಹತೆ ಹೊಂದಿರಬೇಕು.
ಶೈಕ್ಷಣಿಕ ವಿದ್ಯಾರ್ಹತೆ : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು. ಇಂತವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ವಾಸಸ್ಥಳ ವಿವರ :
ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಒಂದು ವೇಳೆ ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯ ಇಲ್ಲದಿದ್ದಲ್ಲಿ, ಆಯಾ ತಾಲೂಕು ವ್ಯಾಪ್ತಿಯಲ್ಲಿನ ಹತ್ತಿರದ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ತಹಶೀಲ್ದಾರರಿಂದ ವಾಸಸ್ಥಳ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸತಕ್ಕದ್ದು.

ವಯೋಮಿತಿ – Age limit :
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಹಾಗೂ ಗರಿಷ್ಠ ವಯೋಮಿತಿಯನ್ನು ವರ್ಗಗಳ ಅನುಸಾರ ಈ ಕೆಳಗಿನಂತೆ ಇರಬೇಕು.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು – 18 ರಿಂದ 35 ವರ್ಷ
  • 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳು – 18 ರಿಂದ 38 ವರ್ಷ
  • ಪ.ಜಾತಿ / ಪ.ಪಂ/ಪ್ರವರ್ಗ-1 – 18 ರಿಂದ 40 ವರ್ಷ

ಅರ್ಜಿ ಹೇಗೆ ಸಲ್ಲಿಸಬೇಕು?

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು https://shimoga.nic.in ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಂಡು, ಅರ್ಜಿಯನ್ನು ಭರ್ತಿಮಾಡಿ ಸಂಬಂದಿಸಿದ ದಾಖಲೆಗಳನ್ನು ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳಿಂದ ದೃಢೀಕರಿಸಿಕೊಂಡು ನೇರವಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರಲ್ಲಿ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು. ಅರ್ಜಿಗಳನ್ನು ಸ್ವಯಂ ಭೇಟಿ ನೀಡಿ ಅಥವಾ ಅಂಚೆ ಮೂಲಕ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ. ಅಂಚೆ ಮೂಲಕ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಲಕೋಟೆಯ ಮೇಲೆ ದಪ್ಪವಾದ ಅಕ್ಷರದಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ನೇಮಕಾತಿ ಎಂದು ಬರೆದು ಅರ್ಜಿ ಸಲ್ಲಿಸಬೇಕು.

ಅರ್ಜಿಗಳನ್ನು ಪ್ರಾರಂಭ ಮಾಡುವ ದಿನಾಂಕ : 05-02-2024

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 23-02-2024

Leave a Comment