PUC ಪಾಸಾದವರಿಗೆ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ : ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ ಇಲ್ಲಿದೆ Village administrative officer recruitment 2024
ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಚಾಲತಾನದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಪಿಯುಸಿ ಪಾಸಾದವರಿಗೆ ಖಾಲಿ ಇರುವಂತಹ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಿದ್ದೇವೆ.
ಗ್ರಾಮ ಲೆಕ್ಕಾಧಿಕಾರಿ ಅಥವಾ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಸಂಬಂಧಿಸಿದಂತೆ ವಿವರವಾದ ಮಾಹಿತಿಯನ್ನು ನಮ್ಮ ಈ ಲೇಖನದಲ್ಲಿ ನಿಮಗೆ ತಿಳಿಸಲಿದ್ದೇವೆ.
ಆಸಕ್ತ ಉಳ್ಳ ಅಭ್ಯರ್ಥಿಗಳು ಈ ಕೂಡಲೇ ನಾವು ಕೆಳಗೆ ನೀಡಿರುವ ಎಲ್ಲಾ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಂಡು ನೀವ್ ಅರ್ಹತೆ ಇದ್ದರೆ ತಡಮಾಡದೆ ಅರ್ಜಿ ಸಲ್ಲಿಸಿ.
Village administrative officer recruitment 2024 :
ರಾಜ್ಯದ ಕಂದಾಯ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಒಟ್ಟು 1,000 ಹುದ್ದೆಗಳ ಖಾಲಿ ಇರುತ್ತವೆ. ಖಾಲಿ ಇರುವಂತಹ ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಕಂದಾಯ ಇಲಾಖೆಯು ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಅರ್ಹತೆ : ರಾಜ್ಯದಲ್ಲಿ ಖಾಲಿ ಇರುವಂತಹ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು, ಅಭ್ಯರ್ಥಿಗಳಿಗೆ 12ನೇ ತರಗತಿ ಅಥವಾ ಪಿಯುಸಿ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ಆದ್ದರಿಂದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ :
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು 35 ವರ್ಷ ಮೇಲಿರಬಾರದು. ಒಂದು ವೇಳೆ ನೀವು ಮೀಸಲಾತಿ ವ್ಯಾಪ್ತಿಯಲ್ಲಿ ಬರುವುದಾದರೆ ನಿಮಗೆ ವಯೋಮಿತಿ ಸಡಿಲಿಕೆಯನ್ನು ಕೂಡ ನೀಡಲಾಗುವುದು. 2A, 2B, 3A, 3B ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 38 ವರ್ಷ ನಿಗದಿಪಡಿಸಲಾಗಿದೆ. ಅದೇ ರೀತಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 40ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಗ್ರಾಮ ಆಡಳಿತ ಅಧಿಕಾರಿಯಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 21,400 ರೂ. ಇಂದ 42000 ರೂ. ತನಕ ಸಂಬಳವನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು 4ನೇ ಮಾರ್ಚ್ 2024 ರಂದು ಆರಂಭವಾಗಲಿದೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 03ನೇ ಏಪ್ರಿಲ್ 2024 ಕೊನೆಯ ದಿನಾಂಕವಾಗಿರುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭವಾದ ದಿನಾಂಕದಿಂದ ತಡ ಮಾಡದೆ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.
ಅರ್ಜಿ ಶುಲ್ಕ : ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತಹ ಗ್ರಾಮ ಆಡಳಿತ ಅಧಿಕಾರಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 750 ರೂಪಾಯಿ.
ಅದೇ ರೀತಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 500 ರೂಪಾಯಿ.