ಎಲ್ಲರಿಗೂ ನಮಸ್ಕಾರ ಬಂಧುಗಳೇ.
ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ರೈತರಿಗೆ, ಸಾರ್ವಜನಿಕರಿಗೆ ,ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ನೌಕರಿ ಹುಡುಕುತ್ತಿರುವವರಿಗೆ ಸಹಾಯವಾಗುವಂತಹ ಮಾಹಿತಿಗಳನ್ನು ಪ್ರತಿನಿತ್ಯ ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಕಲ ಸಿದ್ಧತೆ ನಡೆದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಯ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ಇದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಜೊತೆಗೆ 357 ಸರ್ವೇಯರ್ ನೇಮಕಾತಿ –
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಷ್ಟೇ ಅಲ್ಲದೆ ಕಂದಾಯ ಇಲಾಖೆಯಿಂದ 357 ಸರ್ವೆಯರ್ ಹುದ್ದೆಗಳ ನೇಮಕಾತಿಗೂ ಕೂಡ ತಯಾರಿ ನಡೆಸುತ್ತಿದ್ದೇವೆ ಎಂದು ಕಂದಾಯ ಇಲಾಖೆ ಸಚಿವರಾದ ಕೃಷ್ಣ ಬೈರೇಗೌಡರು ಹೇಳುತ್ತಾರೆ.
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಅರ್ಹರಾ?
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 12ನೇ ತರಗತಿ ಪಾಸ್ ಆಗಿರಬೇಕು.
ಈ ಒಂದು ಶಿಕ್ಷಣ ಹೊಂದಿದ್ದರೆ ನೀವು ಅರ್ಜಿ ಸಲ್ಲಿಸಲು ಅರ್ಹರಿರುತ್ತೀರಿ. ಈ ಒಂದು ನೇಮಕಾತಿಯ ಕುರಿತು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಅಧಿಕೃತ ಅಧಿಸೂಚನೆ ಹೊರಡಿಸಿದ ನಂತರ ನಿಮಗೆ ನಾವು ಶೀಘ್ರದಲ್ಲಿ ತಿಳಿಸುತ್ತೇವೆ.
ಗ್ರಾಮ ಲೆಕ್ಕಾಧಿಕಾರಿಯಾಗಿ ಆಯ್ಕೆಯಾದರೆ ನಿಮಗೆ ಸಂಬಳ ಎಷ್ಟು ಇರುತ್ತದೆ?
ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯಾದರೆ ಅವರಿಗೆ ಪ್ರತಿ ತಿಂಗಳು 21,000 ರೂಪಾಯಿಯಿಂದ ಮಾಸಿಕ ಸಂಬಳ ಇರುತ್ತದೆ. ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿ ಇರುವವರಿಗೆ ಇದೊಂದು ಭರ್ಜರಿ ಅವಕಾಶವಾಗಿದ್ದು ಎಲ್ಲ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳ ಈ ಒಂದು ಸುವರ್ಣ ಅವಕಾಶವನ್ನು ಸದಾ ಉಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಸುವುದು ಹೇಗೆ?
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ಇನ್ನೇನು ಕೆಲವೇ ದಿನಗಳಲ್ಲಿ ಅಧಿಸೂಚನೆಯನ್ನು ಹೊರಡಿಸಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭ ಮಾಡಲಿದೆ. ಆದ್ದರಿಂದ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಪ್ರಮುಖ ಮಾಹಿತಿಯನ್ನು ತಿಳಿದುಕೊಂಡು ಈ ಕೆಳಗಿನ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡ ನಂತರ ಅತಿ ಸಲ್ಲಿಸಲು ಮುಂದಾಗಿರಿ.
ಅರ್ಜಿ ಸಲ್ಲಿಸುವ ಮೊದಲು ಅರ್ಹ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ಹಾಗೂ ಡೌನ್ಲೋಡ್ ಮಾಡಿಕೊಂಡ ನಂತರ ಸೂಚನೆಯನ್ನು ವಿವರವಾಗಿ ಸಂಪೂರ್ಣ ಮಾಹಿತಿಯನ್ನು ಸರಿಯಾಗಿ ಓದಿ ಎಲ್ಲಾ ಅರ್ಹತೆಗಳನ್ನು ಪರಿಶೀಲಿಸಿ.
ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಎಚ್ಚರಿಕೆಯಿಂದ ಓದಿದ ನಂತರದಲ್ಲಿ ನಿಮ್ಮ ಅರ್ಹತೆಗಳನ್ನು ಪರಿಶೀಲಿಸಿಕೊಂಡ ನಂತರ, ನೀವು ಅರ್ಹರೇನಿಸಿದರೆ ಮಾತ್ರ, ಅರ್ಜಿ ಸಲ್ಲಿಸುವ ಮುಂದಿನ ಪ್ರಕ್ರಿಯೆಯನ್ನು ಆರಂಭಿಸಿ. ನಂತರ ಅರ್ಜಿ ಸಲ್ಲಿಸಲು ಪ್ರಕ್ರಿಯೆ ಆನ್‌ಲೈನ್ ಇದೆಯೋ ಅಥವಾ ಆಫ್‌ಲೈನ್ ಇದೆಯೋ ಎಂದು ಪರಿಶೀಲಿಕೊಂಡು ನೇಮಕಾತಿಯ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಅಲ್ಲಿ ಕೇಳಲಾಗುವ ಅರ್ಜಿ ನಮೂನೆಯ ಎಲ್ಲಾ ಮಾಹಿತಿಯನ್ನು ಸರಿಯಾಗಿ ಮತ್ತೊಮ್ಮೆ ಪರಿಶೀಲನೆ ಭರ್ತಿ ಮಾಡಿ. ಏಕೆಂದರೆ ಅರ್ಜಿ ಸಲ್ಲಿಸಿದ ನಂತರ ಕೆಲವೊಂದು ಬಾರಿ ತಿದ್ದುಪಡಿ ಮಾಡಲು ಸಾಧ್ಯವಾಗುವುದಿಲ್ಲ. ಅರ್ಜಿ ಶುಲ್ಕದ ಪಾವತಿ ನಿಮ್ಮ ವರ್ಗಕ್ಕೆ ತಕ್ಕಂತೆ ನಿಗಧಿಪಡಿಸಿರುವ ಅರ್ಜಿ ಶುಲ್ಕವನ್ನು ಆನ್ಲೈನ್ ಅಥವಾ ಆಫ್ ಲೈನ್ ಎಂದು ಪರಿಶೀಲಿಸಿ ಪಾವತಿ ಮಾಡಿ (ವಿನಂತಿಸಿದರೆ ಮಾತ್ರ) ನಿಮ್ಮ ಇತ್ತೀಚಿನ ಸೂಕ್ತವಾದ ಫೋಟೋ ಅಥವಾ ಭಾವಚಿತ್ರವನ್ನು ಮತ್ತು ನಿಮ್ಮ ಸಹಿಯನ್ನು ಲಗತ್ತಿಸಿ ( ಅವರು ಕೇಳಿದ್ದರೆ ಮಾತ್ರ ) ಮತ್ತೊಮ್ಮೆ ನಿಮ್ಮ ಅರ್ಜಿ ನಮೂನೆಯನ್ನು ಪರಿಶೀಲಿಸಿ ಮತ್ತು ಅರ್ಜಿ ಸಲ್ಲಿಸಿ.
ಈ ಒಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ತಿಳಿದುಕೊಂಡ ನಂತರ, ಕಂದಾಯ ಇಲಾಖೆ ಅರ್ಜಿ ಸಲ್ಲಿಸುವುದನ್ನು ಕರೆಯದ ನಂತರ ತಡಮಾಡದೆ ನೀವು ಅರ್ಹತೆಯನ್ನು ಹೊಂದಿದ್ದರೆ ಅರ್ಜಿ ಸಲ್ಲಿಸಿ.
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು ಉತ್ತಮ ಹುದ್ದೆಗಳಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿಯ ಒಂದು ಉನ್ನತ ಹುದ್ದೆಯಾಗಿರುತ್ತದೆ. ಈ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಾಗಿ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಸಕಲ ಸಿದ್ಧತೆಯನ್ನು ಮಾಡಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಿದೆ.
ಆದ್ದರಿಂದ ಅರ್ಹರಿರುವ ಎಲ್ಲಾ ಆಸಕ್ತ ಅಭ್ಯರ್ಥಿಗಳು ಈ ಒಂದು ಬೃಹತ್ ನೇಮಕಾತಿಯ ಸದುಪಯೋಗವನ್ನು ಪಡೆಸಿಕೊಂಡು ಈ ಸರ್ಕಾರಿ ಹುದ್ದೆಗಳನ್ನು ನಿಮ್ಮದಾಗಿಸಿಕೊಳ್ಳಲು ಈಗಿನಿಂದಲೇ ತಯಾರಿ ಮಾಡಿ.
ಇದೇ ರೀತಿ ವಿದ್ಯಾರ್ಥಿಗಳಿಗೆ ಉದ್ಯೋಗ ಹುಡುಕುತ್ತಿರುವವರಿಗೆ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಹಾಯವಾಗುವಂತಹ ಪ್ರತಿನಿತ್ಯ ಮಾಹಿತಿಯನ್ನು ನಮ್ಮ ಈ ಜಾಲತಾಣದಲ್ಲಿ ನೀಡುತ್ತಿದ್ದೇವೆ. ಈ ಎಲ್ಲಾ ಮಾಹಿತಿಗಳು ನಿಮಗೆ ಉಪಯುಕ್ತವೆನಿಸಿದರೆ, ನಿಮ್ಮ ಎಲ್ಲಾ ಸ್ನೇಹಿತ ಬಾಂಧವರಿಗೂ ಕುಟುಂಬ ಬಾಂಧವರಿಗೂ ಈ ಮಾಹಿತಿಯನ್ನು ಹಂಚಿಕೊಳ್ಳಿ. ಎಲ್ಲರಿಗೂ ಧನ್ಯವಾದಗಳು.